ಪಂಚಾಂಗವೆಂದರೇನು ?
ತಿಥಿ, ವಾರ, ನಕ್ಷತ್ರ, ಯೋಗ, ಕರಣ ಎ೦ಬ ಐದು ಅಂಶಗಳಿಗೆ ಪಂಚಾಂಗವೆಂದು ವ್ಯವಹಾರ. ಇವು ದಿನದಿನವೂ ಬದಲಾಗುತ್ತದೆ. ಮಾಸ, ಪಕ್ಷ, ಋತುಗಳು ಬದಲಾಗುವವಾದರೂ ಪ್ರತಿ ದಿನವೂ ಬದಲಾಗುವುದಿಲ್ಲ. ಆದರೆ ಇಂದಿನ ತಿಥಿ, ವಾರಗಳು ನಾಳೆ ಇರುವುದಿಲ್ಲ. ನಕ್ಷತ್ರ, ಯೋಗ, ಕರಣಗಳೂ ಹಾಗೆಯೇ. ಹೀಗೆ ಪ್ರತಿದಿನವೂ ವ್ಯತ್ಯಾಸವಾಗುವ ಈ ಐದು ಅಂಗಗಳೇ ಪಂಚಾಂಗಗಳು.
ಈ ಐದರ ಬಗ್ಗೆ ವಿವರ ನೀಡುವ ಪುಸ್ತಕವನ್ನು ಪಂಚಾಂಗವೆಂದು ಕರೆಯುತ್ತೇವೆ.

ಹೆಚ್ಚಿನ ಮಾಹಿತಿಗಾಗಿ ಈ ಕೊಂಡಿಯನ್ನು ಕ್ಲಿಕ್ ಮಾಡಿ ಪಂಚಾಂಗ